ಸಾಮಾಜಿಕ ಜಾಲತಾಣಗಳಲ್ಲಿ, ಎಸ್.ಎಮ್.ಎಸ್, ಇ-ಮೇಲ್ಗಳಲ್ಲಿ ಬರೆಯುವ ಕಂಗ್ಲೀಷ್ (kanglish) ಓದಲು ಹಿಂಸೆಯಾದಾಗ ಅದೆಷ್ಟೇ ಒಳ್ಳೆಯ ಮಾಹಿತಿ ಇದ್ದರೂ, ಅದನ್ನು ಓದದೆ ಮುಂದುವರೆಯುವುದು ನನ್ನ ಅಭ್ಯಾಸ. ಆದರೆ ಇದರಿಂದ ಭಾಷೆಗೆ ಇಂಟರ್ನೆಟ್ನಲ್ಲಿ ದೊರಕಬೇಕಾದ ಜಾಗವನ್ನೂ ಕಂಗ್ಲೀಷ್ ಬರೆಯುವ ಅನೇಕರು ಕಸಿಯುತ್ತಿರುವುದನ್ನು ಕಂಡಾಗ, ಮತ್ತೆ ಮತ್ತೆ ಕನ್ನಡ ಟೈಪಿಸುವುದು ಹೇಗೆ ಎಂದು ಹೇಳುವುದನ್ನು ಆಗ್ಗಾಗೆ ಮಾಡಿದರೂ, ಅದನ್ನು ಇನ್ನೊಮ್ಮೆ ಬ್ಲಾಗಿಸಲೇ ಬೇಕಿರುವ ಅಗತ್ಯತೆ ಹೆಚ್ಚುತ್ತಿದೆ.
ಕನ್ನಡದ ಪದಗಳನ್ನು ಯುನಿಕೋಡ್ನಲ್ಲಿ ಗೂಗಲ್, ಬಿಂಗ್, ಯಾಹೂ ನಂತಹ ಸರ್ಚ್ ಎಂಜಿನ್ಗಳು ನೋಡಲು ಸಾಧ್ಯವಾಗದೆ ಇದ್ದಾಗ, ಈ ಕಂಪೆನಿಗಳು ಆಯಾ ಭಾಷೆಗೆ ಬೇಕಿರುವ ಸೌಲಭ್ಯಗಳನ್ನು ತಮ್ಮ ವೆಬ್ಸೈಟ್ನಿಂದ ಒದಗಿಸಲು ಮುಂದೆ ಬರುವುದಿಲ್ಲ. ಕನ್ನಡದ ಬಳಕೆ ಇಂಟರ್ನೆಟ್ ನಲ್ಲಿ ಹೆಚ್ಚಾಗಲು ನಾವು ಅದನ್ನು ಇಂಗ್ಲೀಷ್ನಲ್ಲೇ ಟೈಪಿಸಿದರೆ ಸಾಲದು, ಜೊತೆಗೆ ಎಲ್ಲರು ನೋಡಲು ಇಚ್ಚೆ ಪಡುವ, ನೋಡಲು ಸಾಧ್ಯವಾಗಿಸುವ ಯುನಿಕೋಡ್ನಲ್ಲೇ ಟೈಪಿಸಬೇಕು.
ಬರಹ, ನುಡಿ ಇತ್ಯಾದಿಗಳ ತಂತ್ರಾಂಶಗಳು ಲಭ್ಯವಿಲ್ಲದ ಪಕ್ಷದಲ್ಲಿ ಗೂಗಲ್ ಕ್ರೋಮ್ನ
ವಿಕಿಮೀಡಿಯ ಇನ್ಪುಟ್ ಟೂಲ್ಸ್ ಎನ್ನುವ ಈ ಕೆಳಗಿನ ಚಿತ್ರದಲ್ಲಿರುವ ಎಕ್ಸ್ಟೆನ್ಷನ್ ಬಳಸಿ ಕನ್ನಡ ಅಥವಾ ಇನ್ಯಾವುದೇ ಭಾಷೆಗಳನ್ನು ಟೈಪಿಸಲು ಸಾಧ್ಯವಿದೆ.
ಈ ಎಕ್ಸ್ಟೆನ್ಷನ್ ವಿಕಿಪೀಡಿಯವನ್ನು ನೆಡೆಸುತ್ತಿರುವ ವಿಕಿಮೀಡಿಯ ಫೌಂಡೇಷನ್ನ …
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ